Friday, June 5, 2026
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಸಮಸ್ಯೆ ನಿವಾರಣೆಗೆ ಆಗ್ರಹ

- Advertisement -
- Advertisement -

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವ ಉಂಟಾಗಿರುವ ಕಾರಣದಿಂದಾಗಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಕೆಲಸವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಸಮಸ್ಯೆ ನಿವಾರಣೆಗೆ ತುರ್ತುಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(ಸಿಡಬ್ಲ್ಯುಎಫ್‌ಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಡಬ್ಲ್ಯುಎಫ್‌ಐ ಅಧ್ಯಕ್ಷ ವಸಂತ ಆಚಾರಿ ಅವರು ಕೆಂಪು ಕಲ್ಲು ಮತ್ತು ಮರಳು ಸಿಗದ ಕಾರಣದಿಂದಾಗಿ ಜನಸಾಮಾನ್ಯರು ಮನೆ ಕಟ್ಟುವ ಯೋಜನೆ ಸಂಪೂರ್ಣ ಸ್ಥಗಿತಗೊಂಡಿದೆ. ಕಟ್ಟಡ ಮತ್ತು ನಿರ್ಮಾಣ ರಂಗದ ಕಚ್ಚಾ ವಸ್ತುಗಳ ಅಭಾವದಿಂದಾಗಿ ಪರೋಕ್ಷವಾಗಿ ಲಾರಿಗಳಲ್ಲಿ ದುಡಿಯುವ ಕಾರ್ಮಿಕರು, ಅಂಗಡಿ-ಮುಗ್ಗಟ್ಟುಗಳ ಮಾಲೀಕರು, ಕೆಲಸಗಾರರು, ಇತರೆ ವ್ಯಾಪಾರಿವರ್ಗ ಮತ್ತು ಆರ್ಥಿಕ ಸಂಸ್ಥೆಗಳು ದೊಡ್ಡ ಪ್ರಮಾಣದಲ್ಲಿ ತೊಂದರೆಗೊಳಗಾಗಿವೆ. ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಮತ್ತು ಜಿಲ್ಲಾಡಳಿತದ ಬಾಹ್ಯ ಬೆಂಬಲದ ಪರಿಣಾಮವಾಗಿ ನಡೆಯು ತ್ತಿದ್ದ ಅಕ್ರಮ ದಂಧೆಗಳಿಗೆ ಈಗಿನ ಪೊಲೀಸ್ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ವಹಿಸಿದ್ದಾರೆ. ಇದರಿಂದ ಕೆಂಪು ಕಲ್ಲು ಮತ್ತು ಮರಳು ಅಭಾವ ಉಂಟಾಗಿದೆ ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳ ನೀಡಿರುವ ಪ್ರಕಾರ 2025 ಅಕ್ಟೋಬರ್ 15ರ ವರೆಗೆ ಮರಳುಗಾರಿಕೆಗೆ ನಿಷೇಧವಿರುವ ಕಾರಣ ಎಲ್ಲೂ ಮರಳು ತೆಗೆಯುವಂತಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಮರಳಿನ ಸಂಗ್ರಹವಿದ್ದು ‘ಸ್ಯಾಂಡ್ ಬಜಾರ್’ ಆ್ಯಪ್ ಮೂಲಕ ಮರಳು ಪಡೆಯಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಸ್ಯಾಂಡ್ ಬಜಾ‌ರ್ ಸರಿಯಾಗಿ ತೆರೆಯುತ್ತಿಲ್ಲ. ಬೇರೆ ಬೇರೆ ಕಡೆಗಳಿಂದ ಬರುವ ಮರಳು ಒಂದು ಲೋಡಿಗೆ ರೂ.22 ಸಾವಿರದಷ್ಟು ದುಬಾರಿಯಾಗಿದೆ. ಕೆಂಪು ಕಲ್ಲು ಒಂದಕ್ಕೆ ರೂ.50ಕ್ಕೂ ಮಿಕ್ಕಿ ಏರಿಕೆ ಆಗಿರುತ್ತದೆ ಎಂದು ಮಾಹಿತಿ ನೀಡಿದರು.

- Advertisement -

Related news

error: Content is protected !!