- Advertisement -
- Advertisement -



ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಮೂಲಕ ರಸ್ತೆ ನಿರ್ಮಿಸುವ ಸಾರ್ವಜನಿಕರ ಹಣದ ಲೂಟಿಯ ಯೋಜನೆಯನ್ನು ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರ, ಬಿಬಿಎಂಪಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದ ರೀತಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಎಚ್ಚರಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಟನೆಲ್ ರಸ್ತೆ ಯೋಜನೆಯನ್ನು ಬಿಜೆಪಿ ವಿರೋಧಿಸುತ್ತದೆ. ಸಾರ್ವಜನಿಕರ ಒಂದೊಂದು ರೂಪಾಯಿಗೆ ನ್ಯಾಯ ಸಿಗುವ ರೀತಿಯಲ್ಲಿ ನಾವು ಹೋರಾಟ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
- Advertisement -








