- Advertisement -
- Advertisement -



ಮುಂಬಯಿ: ವಿಶ್ವದ ಆಟೋಮೊಬೈಲ್ ಕ್ಷೇತ್ರದ ದಿಗ್ಗಜ,ಎಲೆಕ್ಟಿಕ್ ಕಾರು ತಯಾರಕ ಸಂಸ್ಥೆಯಾದ ಟೆಸ್ಲಾ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದ್ದು, ಮುಂಬಯಿಯ ಬಾಂದ್ರಾ-ಕುರ್ಲಾ ಸಂಕೀರ್ಣದಲ್ಲಿ ತನ್ನ ಮೊದಲ ಎಕ್ಷೀರಿಯನ್ಸ್ ಸೆಂಟರ್ ಮಂಗಳವಾರ ಉದ್ಘಾಟನೆಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರವು ದೇಶದಲ್ಲೇ ಅತಿ ದೊಡ್ಡ ಎಲೆಕ್ಟಿಕ್ ವಾಹನ (ಇವಿ) ಉತ್ಪಾದನಾ ಸಾಮರ್ಥ್ಯ ಹೊಂದಿರುವ ರಾಜ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ವಿಶ್ವದ ಅತ್ಯಂತ ಸ್ಮಾರ್ಟ್ ಕಾರು ಭಾರತಕ್ಕೆ, ಅದರಲ್ಲೂ ವಿಶೇಷವಾಗಿ ಮುಂಬಯಿಗೆ ಬರುತ್ತಿರುವುದು ಸಂತೋಷದ ವಿಷಯ. ಟೆಸ್ಲಾ ತನ್ನ ಎಕ್ಸಿರಿಯನ್ಸ್ ಸೆಂಟರ್ ಮೂಲಕ ಮಹಾರಾಷ್ಟ್ರದಿಂದ ಭಾರತಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡುತ್ತಿದೆ ಎಂದು ಫಡ್ನವೀಸ್ ಘೋಷಿಸಿದರು.
- Advertisement -








