Tuesday, September 8, 2026
spot_imgspot_img
spot_imgspot_img

ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದುಕೊಂಡು ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ

- Advertisement -
- Advertisement -

ಚಿಕ್ಕಮಗಳೂರು: ಕ್ವಾಟ್ರಸ್ ನಲ್ಲೆ ಹೆಡ್ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬಾ‌ರ್ ಲೈನ್‌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಕಾಂತರಾಜ್ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರಾದ ಕಾಂತರಾಜ್ ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ನಡೆದ ಅಪಘಾತವೊಂದರಲ್ಲಿ ಕಾಂತರಾಜು ತನ್ನ ಬಲಗಾಲು ಕಳೆದುಕೊಂಡಿದ್ದು ಕೃತಕ ಕಾಲು ಜೋಡಣೆ ಮೂಲಕ ಕೆಲಸ ಮಾಡುತ್ತಿದ್ದರು. ಅಲ್ಲದೆ ಅಪಘಾತದಲ್ಲಿ ಕಾಲು ಕಳೆದುಕೊಂಡಾಗಿನಿಂದ ಕಾಂತರಾಜ್ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ಹೇಳಲಾಗಿದೆ.ಈ ನಡುವೆ ಕುಟುಂಬ ಸದಸ್ಯರು ಊರಿಗೆ ತೆರಳಿದ ವೇಳೆ ಕ್ವಾಟ್ರಸ್ ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ,ಕಾಂತರಾಜ್ ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ.ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!