Sunday, August 2, 2026
spot_imgspot_img
spot_imgspot_img

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು..!

- Advertisement -
- Advertisement -

ಸುಳ್ಯ: ಭಾನುವಾರ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಬೈಲು ನಿವಾಸಿ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್ ಚೆದ್ಮಾರ್ ಅವರ ತಾಯಿ ಕಮಲಾ ಚೆತ್ಕಾರ್(67) ಎಂದು ಗುರುತಿಸಲಾಗಿದೆ.

ಕಮಲಾ ಅವರು ಸಂಪಾಜೆಗೆ ಹೋಗುವ ಬಸ್ ಹತ್ತುವುದಕ್ಕಾಗಿ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದಾಗ, ಸುಳ್ಯದ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಬೈಕ್ ನಿಯಂತ್ರಣ ಕಳೆದುಕೊಂಡು ಅವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!