Monday, September 7, 2026
spot_imgspot_img
spot_imgspot_img

ಕೋಮು ಸೌಹಾರ್ದತೆಗೆ ಧಕ್ಕೆ: ರಕ್ಷಿತ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲು

- Advertisement -
- Advertisement -

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ಎಂಬಾತ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿದ್ದಾನೆ. ಈ ವಿಚಾರ 31-07-2025ರಂದು ಸಾಮಾಜಿಕ ಜಾಲತಾಣದ ಮೂಲಕ ತಿಳಿದುಬಂದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 69/202503 00:353(1)(ಬಿ), 353(2) ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!