Tuesday, September 1, 2026
spot_imgspot_img
spot_imgspot_img

ಉಪ್ಪಿನಂಗಡಿ: ಮಹಿಳೆ ನಾಪತ್ತೆ

- Advertisement -
- Advertisement -

ಉಪ್ಪಿನಂಗಡಿ : ಇಲ್ಲಿನ 34 ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ಮನೆ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26 ವ.) ಎಂಬಾಕೆ ನಾಪತ್ತೆಯಾದವರು.ಭೀಮಪ್ಪ-ರೇಷ್ಮಾ ದಂಪತಿ 34 ನೇ ನೆಕ್ಕಿಲಾಡಿ ಎಂಬಲ್ಲಿನ ಇಮ್ಮಿಯಾಜ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಭೀಮಪ್ಪ ನಾಗರ ಪಂಚಮಿ ಹಬ್ಬಕ್ಕಾಗಿ ಜು.26ರಂದು ಹಾವೇರಿಗೆ ಹೋಗಿದ್ದರು.ಜು. 30ರಂದು ಅವರು ಹಿಂತಿರುಗಿ ಬಂದಾಗ ಪತ್ನಿ ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲವೆಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!