- Advertisement -
- Advertisement -



ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನಲೆ ವ್ಯಕ್ತಿಯೋರ್ವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42) ಎಂಬವರ ದೂರಿನಂತೆ ಇವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ನ ಕುಲುಮೆ ಎಂಬ ಗ್ರೂಪ್ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ.
ಈ ಬಗ್ಗೆ ಕಲಂದರ್ ಪುತ್ತುಮೋನು ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ: 70/2025, ಕಲಂ:353 (1)(b), 353(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -








