Friday, June 5, 2026
spot_imgspot_img
spot_imgspot_img

ಉಡುಪಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಪರಾರಿ

- Advertisement -
- Advertisement -

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್‌ ಠಾಣೆಯ ಮುಂಭಾಗದಲ್ಲಿ ನಡೆದಿದೆ.

ಮಣಿಪಾಲದಿಂದ ಉಡುಪಿಯತ್ತ ಅತೀ ವೇಗದಲ್ಲಿ ಆಗಮಿಸಿದ ಬೆಂಗಳೂರು ನೋಂದಣಿ ಇರುವ ಕಾರು ಇದಾಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದೆ. ಅಪಘಾತ ನಡೆದ ಕೂಡಲೇ ಆತ ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!