- Advertisement -
- Advertisement -



ಪುತ್ತೂರು: ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶ ಪ್ರಸಾರ ಮಾಡಿದ್ದು ಈ ಬಗ್ಗೆ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ, ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಫೇಸ್‌ಬುಕ್ ಖಾತೆಯಲ್ಲಿ ಪ್ರಸಾರ ಮಾಡಿರುವುದು ಆ4 ರಂದು ಕಂಡುಬಂದಿರುತ್ತದೆ.
ಫೇಸ್‌ಬುಕ್ ಸಂದೇಶದಿಂದ ವಿಭಿನ್ನ ಕೋಮುಗಳ ನಡುವೆ ದ್ವೇಷ ಮೂಡಿ, ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯಾಗುವ ಸಾದ್ಯತೆ ಇರುವುದರಿಂದ, ಈ ಫೇಸ್‌ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 67/2025, ಕಲಂ: 196(1) (a) 353(2)BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -








