- Advertisement -
- Advertisement -
ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಳ್ಳಂಬೆಳ್ಳಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ದರೋಡೆ ಆರೋಪಿ ಅನ್ಬನ್ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಲಗ್ಗೆರೆ ಸಮೀಪದ ಕೂಲಿ ನಗರ ಬ್ರಿಡ್ಜ್ ಬಳಿ ಈ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿ ಅನ್ಬನ್ ನನ್ನು ಬಂಧಿಸಲು ತೆರಳಿದ್ದ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ.
ರಿಂಗ್ ರಸ್ತೆಯಲ್ಲಿ ಲಾರಿ ತಡೆದಿದ್ದ ಆರೋಪಿ. ಚಾಲಕನ ಬಳಿ ಇದ್ದ ವಸ್ತುಗಳನ್ನು ದರೋಡೆ ಮಾಡಿದ್ದ ಎಂದು ಆರೋಪಿಸಲಾಗಿದೆ. ನಂದಿನಿ ಲೇ ಔಟ್ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ಕಾನ್ ಸ್ಟೇಬಲ್ ಅಭಿಷೇಕ್ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.
- Advertisement -