Friday, June 27, 2025
spot_imgspot_img
spot_imgspot_img

‘ನಿವಾರ್’ ಚಂಡಮಾರುತದ ಪರಿಣಾಮ – ಬೆಂಗಳೂರಲ್ಲಿ ಭಾರೀ ಚಳಿ ಸಾಧ್ಯತೆ !!

- Advertisement -
- Advertisement -

ಬೆಂಗಳೂರು: ನಿವಾರ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಡಿಸೆಂಬರ್ ನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ನಿವಾರ್ ಸೃಷ್ಟಿಸಿದ್ದ ಅವಾಂತರದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಆಗಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ, ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.


ತೀವ್ರವಾದ ಗಾಳಿ ಮತ್ತು ಮೋಡ ಮುಸುಕಿದ ವಾತಾವರಣ ಇರಲಿದ್ದು, ಇದು ಬೆಂಗಳೂರಿನ ಚಳಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ತಾಪಮಾನ ಕುಸಿಯಲಿದ್ದು, ಡಿಸೆಂಬರ್’ನಲ್ಲಿ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.


ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿರುವ ನಿವಾರ್ ಚಂಡಮಾರುತ ವಾಯವ್ಯ ದಿಕ್ಕಿನಲ್ಲಿ ಸಂಚರಿಸಲಿದ್ದು, ದಕ್ಷಿಣ ಭಾರತದ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ. ಡಿಸೆಂಬರ್ 3-4ರ ವೇಳೆಗೆ ಈ ಚಂಡಮಾರುತ ದಕ್ಷಿಣ ಭಾರತದತ್ತ ಧಾವಿಸಲಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!