Saturday, September 5, 2026
spot_imgspot_img
spot_imgspot_img

ಉಪ್ಪಿನಂಗಡಿ: ಮಹಿಳೆಯ ಚಿನ್ನದ ಸರ ಕಳವು ಪ್ರಕರಣ: ಓರ್ವನ ಬಂಧನ; 5.05ಲಕ್ಷ ರೂ. ಮೌಲ್ಯದ ಸೊತ್ತು ವಶ

- Advertisement -
- Advertisement -

ಉಪ್ಪಿನಂಗಡಿ: ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಲಪಟಾಯಿಸಿದ ಪ್ರಕರಣದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ ಎಂದು ತಿಳಿದು ಬಂದಿದ್ದು, ಈತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ໖໖.ಬಂಧಿತನಿಂದ ಅಂದಾಜು 4.54 ಲಕ್ಷ ರೂ. ಮೌಲ್ಯದ ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಬಜಾಜ್ ಪಲ್ಸರ್ ಬೈಕ್ ಸೇರಿ ಒಟ್ಟು 5.05 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಶಕ್ಕೆ ಪಡೆದಿರುವ ಬೈಕ್ ಮೇಲೆ ಮೈಸೂರು ನಗರದ ವಿಜಯ ನಗರ ಪೊಲೀಸ್‌ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವೂ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಜೂನ್ 4 ರಂದು ಬಜಾಜ್ ಫಲ್ಸರ್ ಬೈಕ್ ನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದರು.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ.48-2025 0 309(4) ಬಿಎನ್ ಎಸ್ ಅಡಿ ಪ್ರಕರಣ ದಾಖಲಾಗಿತ್ತು.ಈ ಸಂಬಂಧ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್‌ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತಂಡ ರಚಿಸಿ ಶೋಧಕಾರ್ಯಾಚರಣೆ ಆರಂಭಿಸಲಾಗಿತ್ತು. ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿ ಓರ್ವ ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

- Advertisement -

Related news

error: Content is protected !!