




ಪುತ್ತೂರು: ಬಿಜೆಪಿ ಮುಖಂಡ ಬಿಎಲ್ ಸಂತೋಷ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಇದೀಗ ಜೈಲಿನಲ್ಲಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ದೊರಕುವಂತೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಳೆದ 12 ವರ್ಷಗಳಿಂದ ಮಹೇಶ್ ಶೆಟ್ಟಿ ತಿಮರೋಡಿಯವರು ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟ ಮಾಡುತ್ತಾ ಬಂದಿದ್ದರು. ನಿಂತರ ಹೋರಾಟದ ಮಧ್ಯೆ ಎಲ್ಲಿ, ಯಾವುದೇ ರೀತಿಯಲ್ಲಿ ಕ್ಷೇತ್ರಕ್ಕಾಗಲಿ, ಯಾವುದೇ ವ್ಯವಸ್ಥೆಗೆ ಚುತಿ ಬರುವ ರೀತಿಯಲ್ಲಿ ಅವರು ಮಾತನಾಡಿಲ್ಲ. ಆದರೆ ನಿನ್ನೆ ಏಕಾಏಕಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಕ್ಷುಲ್ಲಕ ಕಾರಣಕ್ಕೆ ನೋಟಿಸ್ ನೀಡಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಅವರಿಗೆ ದೇವರು ಆದಷ್ಟು ಬೇಗ ಜಾಮೀನು ದೊರಕುವಂತೆ ಮಾಡಬೇಕೆಂದು ಅವರ ಅಭಿಮಾನಿಗಳು ಹಾಗೂ ಅಭಿನವ ಭಾರತ ಮಿತ್ರ ಮಂಡಳಿ ಪುತ್ತೂರು ವತಿಯಿಂದ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ತಿಮರೋಡಿ ಪರ ಹೋರಾಟಗಾರ ದಿನೇಶ್ ಜೈನ್ ಹೇಳಿದ್ದಾರೆ.








