- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ.
ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ.
- Advertisement -








