






ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಇ.ಡಿ ದಾಳಿ ನಡೆಸಿದ್ದು, ಇದೀಗ ಅವರನ್ನು ಬಂಧಿಸಲಾಗಿದೆ.ದಾಳಿ ವೇಳೆ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದೆ.ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ ಇಡಿ ಅಧಿಕಾರಿಗಳು, 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಜಪ್ತಿ ಮಾಡಿದೆ ಎಂದು ತಿಳಿದು ಬಂದಿದೆ.ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.








