Thursday, August 6, 2026
spot_imgspot_img
spot_imgspot_img

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಪ್ರಕರಣ: ಯೂಟ್ಯೂಬ‌ರ್ ಸಮೀ‌ರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ಹಾಜರು

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಆರೋಪದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಸಮೀರ್ ಎಂ.ಡಿ ಅವರ ಬೆಂಗಳೂರು ಬಾಡಿಗೆ ಮನೆಯಲ್ಲಿ ಹಾಗೂ ಬಳ್ಳಾರಿಯ ಸ್ವಂತ ಮನೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್‌ ಅಂಟಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರು ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮುಸುಕುಧಾರಿಯಾಗಿ ಗುರುತಿಸಲ್ಪಟ್ಟ ಚಿನ್ನಯ್ಯ ಅಲಿಯಾಸ್ ಮಾಸ್ಕ್ ಮ್ಯಾನ್ ಅವರನ್ನು ಈಗಾಗಲೇ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆತ ವಿಚಾರಣೆಯಲ್ಲಿ ಕೆಲವು ಮಹತ್ವದ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!