Saturday, August 8, 2026
spot_imgspot_img
spot_imgspot_img

ಕಾಪು: ಕಾರು ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ವೃದ್ದ ಸಾವು

- Advertisement -
- Advertisement -

ಕಾಪು: ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಇಂದು ಕಾಪು ಸಮೀಪದ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಮೃತರನ್ನು ಕೊಪ್ಪಲಂಗಡಿಯ ಪೀರು ಸಾಹೇಬ್‌ (70) ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಅತೀವೇಗದಿಂದ ಬಂದು ರಸ್ತೆ ದಾಟಲು ನಿಂತಿದ್ದ ಪೀರು ಸಾಹೇಬ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರನ್ನು ಆಸ್ಪತ್ರೆಗೆ ಸಾಗಿಸಲು ಉಡುಪಿ ಎಸ್‌ಡಿಪಿಐ ಅಂಬ್ಯುಲೆನ್ಸ್ ಸಹಕರಿಸಿತು. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!