- Advertisement -
- Advertisement -






ತೀರ್ಥಹಳ್ಳಿ: ಸಾಗರ ವಲಯ ಅರಣ್ಯ ಸಂಚಾರ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೂಕಬಲ್ (56) ಎಂದು ತಿಳಿದು ಬಂದಿದೆ.ಆರೋಪಿಯು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
- Advertisement -








