- Advertisement -
- Advertisement -


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಆ.28ರಂದು ಪುತ್ತೂರು,ಮಂಗಳೂರು,ಸುಳ್ಯ,ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಾಲೂಕು ತಹಶೀಲ್ದಾರರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮಳೆ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳು, ನದಿ, ಕಾಲುವೆ, ಕೆರೆಗಳ ಬಳಿಗೆ ಮಕ್ಕಳನ್ನು ಕರೆದೊಯ್ಯಬಾರದೆಂದು ಪೋಷಕರಿಗೆ ಸೂಚಿಸಲಾಗಿದೆ. ಸಾರ್ವಜನಿಕರು ನದಿತೀರ ಮತ್ತು ತೋಡುಗಳ ಹತ್ತಿರ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
- Advertisement -








