Monday, August 31, 2026
spot_imgspot_img
spot_imgspot_img

ಕಾಸರಗೋಡು: ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಇನ್ನೋರ್ವ ಗಂಭೀರ

- Advertisement -
- Advertisement -

ಕಾಸರಗೋಡು: ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲತ್ತರದಲ್ಲಿ ನಡೆದಿದೆ.

ಅಂಬಲತ್ತರ ಪಾರಕ್ಲಾಯಿಯ ಗೋಪಿ (60), ಪತ್ನಿ ಇಂದಿರಾ (57) ಹಾಗೂ ಪುತ್ರ ರಂಜಿಸ್ (22) ಮೃತಪಟ್ಟಿದ್ದು, ಇನ್ನೋರ್ವ ಪುತ್ರ ರಾಕೇಶ್ ಗಂಭೀರ ಸ್ಥಿತಿಯಲ್ಲಿ ಇದ್ದು, ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳೀಯರು ನಾಲ್ವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಮೂವರು ಪ್ರಾಣ ಕಳೆದುಕೊಂಡಿರುವುದು ವೈದ್ಯರು ದೃಢಪಡಿಸಿದ್ದಾರೆ. ಆರ್ಥಿಕ ಮುಗ್ಗಟ್ಟು ಘಟನೆಗೆ ಪ್ರಮುಖ ಕಾರಣ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!