- Advertisement -
- Advertisement -





ಮಂಗಳೂರು: ಕೆ.ಸಿ ರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಮಾಹಿತಿಯಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
- Advertisement -








