Monday, July 27, 2026
spot_imgspot_img
spot_imgspot_img

ಬೆಳ್ತಂಗಡಿ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸೋಮವಾರ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ” ಧರ್ಮಸ್ಥಳ ಚಲೋ” ಮತ್ತು ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಬೃಹತ್ ಸಮಾವೇಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ನೀಡಿದರು.ವಿಜಯೇಂದ್ರ ಅವರು ಸೌಜನ್ಯ ತಾಯಿ ಕುಸುಮಾವತಿ ಮತ್ತು ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು.

ಈ ಸಂದರ್ಭ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಪ್ರೀತಮ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.ಬೃಹತ್ ಸಮಾವೇಶ ನಡೆದ ಬೆನ್ನಲ್ಲೇ ನೀಡಿದ ಈ ಭೇಟಿ ಭಾರೀ ಮಹತ್ವ ಪಡೆದುಕೊಂಡಿದ್ದು, ಬಿಜೆಪಿ ಮಾನವೀಯತೆ ಹಾಗೂ ಸಾಂತ್ವನದ ನಿಟ್ಟಿನಲ್ಲಿ ನಡೆಸಲಾಗಿದೆ ಎಂದು ಹೇಳಿದೆ.

- Advertisement -

Related news

error: Content is protected !!