Saturday, September 5, 2026
spot_imgspot_img
spot_imgspot_img

ಬಂಟ್ವಾಳ: ಜಾನುವಾರು ಕಳವು ;ಮೂವರು ಬಂಧನ

- Advertisement -
- Advertisement -

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣ ಹಾಗೂ ಅದರ ಅಂಗಾಂಗಗಳು ಆಗಸ್ಟ್ 15ರಂದು ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಸೆ.05ರಂದು ದಸ್ತಗಿರಿ ಮಾಡಿದ್ದಾರೆ.

ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34) ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18)ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2) BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.ಆರೋಪಿಗಳ ವಿಚಾರಣೆಯ ವೇಳೆ, ಅವರು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಮತ್ತೊಂದು ಜಾನುವಾರು ಹತ್ಯೆ ಪ್ರಕರಣ (ಅಕ್ರ:76/2025)ದಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣ BNS 2023ರ ಕಲಂ 331(4), 305 ಹಾಗೂ ಕರ್ನಾಟಕ ಜಾನುವಾರು ಹತ್ಯೆ ತಡೆ ಕಾಯ್ದೆ 2020ರ ಕಲಂ 4,5ರಡಿ ದಾಖಲಾಗಿದೆ.ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಳ ಇನ್ನಷ್ಟು ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!