Sunday, July 26, 2026
spot_imgspot_img
spot_imgspot_img

ಪೆರ್ಡೂರು: ಶಾಲಾ ಬಸ್‌ ಢಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಉಡುಪಿ: ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಷ್ಟೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೆ.6ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಅಮೃತ ಭಾರತಿ ಶಾಲೆಯ ಬಸ್, ಎದುರಿನಿಂದ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸವಾರ ಗಣೇಶ್ ಹಾಗೂ ಸಹಸವಾರ ಸುದರ್ಶನ್ ಬೈಕ್ ಸಮೇತ ರಸ್ತೆ ಬಿದ್ದರು. ಇದರಿಂದ ಗಂಭೀರ ವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.ಗಾಯಗೊಂಡ ಸುದರ್ಶನ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!