Monday, July 27, 2026
spot_imgspot_img
spot_imgspot_img

ಸುಳ್ಯ: ಕಾರು ಡಿಕ್ಕಿ; ವ್ಯಕ್ತಿ ಮೃತ್ಯು

- Advertisement -
- Advertisement -

ಸುಳ್ಯ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಲೂರು ಗ್ರಾಮದ ಕದಿಕಡ್ಕ ಕಲ್ಲಮುರ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿ ಕನಕಮಜಲು ಗ್ರಾಮದ ಕನ್ನಡ್ಕ ಉಮೇಶ (54) ಎಂದು ತಿಳಿದು ಬಂದಿದೆ.ಅವರು ಜಾಲ್ಲೂರು ಪೇಟೆಯಿಂದ ದಿನಸಿ ಸಾಮಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದರು. ಈ ಸಂದರ್ಭಪುತ್ತೂರು ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಕಾರು ಡಿಕ್ಕಿಯಾಗಿ ಅವರು ರಸ್ತೆಗೆ ಎಸೆಯಲ್ಪಟ್ಟು ಕಾಲು ಮತ್ತು ತಲೆಗೆ ಗಂಭೀರ ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ.ಗಂಭೀರ ಗಾಯಗೊಂಡ ಅವರನ್ನು ಅದೇ ಕಾರಿನಲ್ಲಿ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!