- Advertisement -
- Advertisement -



ಬೆಂಗಳೂರು: ಬೆಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತನನ್ನು ವಯನಾಡ್ ರಿಪ್ಪನ್ ನಿವಾಸಿ, ಚಿಕ್ಕಬಳ್ಳಾಪುರದ ಶಾಂತಿ ನರ್ಸಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಲ್ ಟಿ ವಿದ್ಯಾರ್ಥಿ ಮುಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ.ಅವರು ಚಿಕ್ಕಬಳ್ಳಾಪುರದ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಪ್ರೀತಿ ವಿಚಾರವಾಗಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.
ಈತನ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -








