



ಮಂಗಳೂರು :ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಈತನು ಇಂದು ಬೆಳಗಿನ ಜಾವ ಬೆಂಗಳೂರಿನ ಹುಳಿಮಾವು ಅರಕೆರೆ ಪ್ರದೇಶದಲ್ಲಿ ಮಂಗಳೂರು ನಗರ ಪೊಲೀಸ್ ತಂಡದ ಕೈಗೆ ಸಿಕ್ಕಿಬಿದ್ದಿದ್ದಾನೆ.ನಿಯಾ ವಿರುದ್ಧ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿದ್ದು, ಹಲವು ನ್ಯಾಯಾಲಯಗಳಿಂದ ಅವನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು.ಮಂಗಳೂರು ನಗರ ಕಮೀಷನರೇಟ್ ಘಟಕದಲ್ಲಿ ಕಳೆದ 3 ತಿಂಗಳಲ್ಲಿ ಕನಿಷ್ಠ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 52 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕೋಮು ಗಲಭೆ ಪ್ರಕರಣಗಳು:ಚಂದ್ರಹಾಸ ಕೇಶವ್ ಶೆಟ್ಟಿಗಾರ್, ಲೀಲಾಧರ್, ಖಾದರ್ ಕುಳಾಯಿ, ಶಾಕೀಬ್, ಮೊಹಮ್ಮದ್ ಹುಸೇನ್, ರಮೀಜ್.ರೌಡಿ ಶೀಟರುಗಳು: ಅದಿತ್ಯ ಕುಮಾರ್, ಭರತ್ ಬಾಲು, ಮೊಹಮ್ಮದ್ ಸುಹೈಬ್, ಮೊಹಮ್ಮದ್ ಮುಸ್ತಾಫ್, ಮೊಹಮ್ಮದ್ ನಜೀಮ್, ಉಮ್ಮರ್ ನವಾಫ್, ಉಮ್ಮರ್ ಫಾರೂಕ್, ಫರಾಜ್, ಮೊಹಮ್ಮದ್ ನಿಯಾಜ್.ಎನ್ಡಿಪಿಎಸ್ ಪ್ರಕರಣಗಳು: ಪುಂಪಾ ಕಾಶಿ, ದೀಪಾ ನಾರಾಯಣ, ಮೊಹಮ್ಮದ್ ನಿಹಾಲ್, ಮೊಹಮ್ಮದ್ ಶಫೀಕ್, ಬಾಬರ್ ಪಾಷಾ, ಮೊಹಮ್ಮದ್ ಇಕ್ವಾಲ್, ಅಬೂಬಕರ್.
ಕೊಲೆ ಪ್ರಕರಣ: ಶಾನವಜ್ @ ಶಾನ್.ಕೊಲೆ ಯತ್ನ ಪ್ರಕರಣಗಳು: ಗಣೇಶ್ ಲಕ್ಷ್ಮಣ್ ಸಾಕೇತ್, ಅದಿತ್ಯ ಕುಮಾರ್, ಅಬ್ದುಲ್ ನಾಸೀರ್, ಇಮ್ರಾನ್ @ ಇಂಬು, ರಮೀಜ್, ಮೊಹಮ್ಮದ್ ನಜೀಮ್.ವಾರೆಂಟ್ ಹೊರಡಿಸಲಾದವರು: ವಿಶಾಲ್ ಕುಮಾರ್, ಮೊಹಮ್ಮದ್ ನಿಹಾಲ್, ಇರ್ಷಾದ್, ಹನೀಫ್ ಕೊಕ್ಕಡ ಸೇರಿದಂತೆ 12 ಮಂದಿ.
ಹೆಚ್ಚುವರಿ ಪ್ರಕರಣಬಂಧಿತ ಆರೋಪಿಗಳ ವಿರುದ್ಧ ಬಿಎನ್ಎಸ್ಎಸ್ ಕಲಂ 208, 209 ಹಾಗೂ 269 ಅಡಿಯಲ್ಲಿ ಹೆಚ್ಚುವರಿ ಪ್ರಕರಣಗಳು ದಾಖಲಿಸಲಾಗಿದೆ.








