Sunday, September 6, 2026
spot_imgspot_img
spot_imgspot_img

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಸುಳ್ಯ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಮೃತದೇಹ ಕೃಷಿ ಹೊಂಡದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.ಮೃತಪಟ್ಟವರು ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕಜೆ ಚನಿಯ ಅವರ ಪುತ್ರ ನಾರಾಯಣ (42) ಎಂದು ತಿಳಿದು ಬಂದಿದೆ.ಅವರು ಸೋಮವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದರು.

ಹುಡುಕಾಟ ನಡೆಸಿದಾಗ ಪಕ್ಕದ ಮನೆಯದ ಜಾಗದಲ್ಲಿ ಇರುವ ಕೃಷಿ ಹೊಂಡದ ಬಳಿ ಚಪ್ಪಲಿ, ಮೊಬೈಲ್ ಫೋನ್ ಪತ್ತೆಯಾಯಿತು. ಅನುಮಾನಗೊಂಡು ಕೃಷಿ ಹೊಂಡದಲ್ಲಿ ಹುಡುಕಿದಾಗ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವರ ಸಾವಿಗೆ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!