Tuesday, July 28, 2026
spot_imgspot_img
spot_imgspot_img

ಬಂಟ್ವಾಳ ತಾಲೂಕು ಕಛೇರಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು- ಬಿ. ಕೆ. ಸೇಸಪ್ಪ ಬೆದ್ರಕಾಡು

- Advertisement -
- Advertisement -

ವಿಟ್ಲ: ಬಂಟ್ವಾಳ ಕಂದಾಯ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ನ್ಯಾಯ ವಂಚಿತ ಕಡತಗಳಿಗೆ ನ್ಯಾಯ ಸಿಗದೆ ಇರುವುದು, ಸರ್ಕಾರಿ ಜಮೀನು ಮತ್ತು ನಿವೃತ್ತ ಸೈನಿಕರಿಗೆ ಮೀಸಲಿಟ್ಟ ಜಮೀನು ತೆರವಿಗೆ ವಿಳಂಬ, ಸಾರ್ವಜನಿಕ ರಸ್ತೆಗಳಿಗೆ ಅಡ್ಡಿಪಡಿಸುವವರ ಮೇಲೆ ಕ್ರಮಕ್ಕೆ ಹಿಂದೇಟು ಹಾಕುತ್ತಿರುವುದು ಸೇರಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಡಿ.೭ರಂದು ಬಂಟ್ವಾಳ ತಾಲೂಕು ಕಛೇರಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ಅಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು ತಿಳಿಸಿದರು. ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.


ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬೊಳ್ಮಾರು, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಯು., ಬಂಟ್ವಾಳ ತಾಲೂಕು ಗೌರವಾಧ್ಯಕ್ಷ ಗಣೇಶ್ ಸೀಗೆಬಲ್ಲೆ, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅನಂತಾಡಿ ಉಪಸ್ಥಿತರಿದ್ದರು.

- Advertisement -

Related news

error: Content is protected !!