Sunday, June 21, 2026
spot_imgspot_img
spot_imgspot_img

ಭೂಮಿ ಯಾರನ್ನು ಹೊರತಳ್ಳಲ್ಲ, ಮನುಷ್ಯ ಮಾತ್ರ ಗಡಿ ಹಾಕುತ್ತಾನೆ- ವಿರೋಧಿಗಳಿಗೆ ತಿರುಗೇಟು ನೀಡಿದ ಬಾನು ಮುಷ್ತಾಕ್

- Advertisement -
- Advertisement -

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡಿದರು.

ಉದ್ಘಾಟನೆಗೂ ಮುನ್ನ ಬಾನು ಮುಷ್ತಾಕ್​ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ಮಂಗಳಾರತಿ ಪಡೆದು ನಮಸ್ಕರಿಸಿದರು. ಉದ್ಘಾಟನೆ ಬಳಿಕ ಮಾತಾಡಿದ ಬಾನು ಮುಷ್ತಾಕ್​, ಒಂದಷ್ಟು ವಿರೋಧಗಳು ವ್ಯಕ್ತವಾದರು ನನ್ನನ್ನ ಈ ತಾಯಿ ಕರೆಸಿಕೊಂಡಿದ್ದಾಳೆ ಎಂದರು.

ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿ ಕೃಪಾಶೀರ್ವಾದದಿಂದ ಉದ್ಘಾಟನೆ ಮಾಡಿದ್ದೇವೆ. ನನ್ನ ಆಪ್ತ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದರು. ಆದರೆ ತಾಯಿ ಚಾಮುಂಡೇಶ್ವರಿ ನನ್ನ ಈ ರೀತಿ ಕರೆಸಿಕೊಳ್ಳುತ್ತಿದ್ದಾಳೆ. ಒಂದಷ್ಟು ವಿರೋಧಗಳು ವ್ಯಕ್ತ ಆದರು ನನ್ನನ್ನ ತಾಯಿ ಕರೆಸಿಕೊಂಡಿದ್ದಾಳೆ. ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ ನಾನು ನಿಮ್ಮೆದುರು ನಿಂತಿದ್ದೇನೆ. ಇದು ಜೀವನದ ಅತ್ಯಂತ ಗೌರವದ ಸಂಗತಿ ಎಂದು ಬಾನು ಮುಷ್ತಾಕ್ ಭಾಷಣದಲ್ಲಿ ಹೇಳಿದರು.

ಇದು ನಾಡಿನ ಸಂಸ್ಕೃತಿಯ ಉತ್ಸವ ಹಾಗೂ ಸಮನ್ವಯದ ಮೇಳ ಈ ನೆಲದಲ್ಲಿ ಹುಟ್ಟಿದ್ದ ಪ್ರತಿಯೊಬ್ಬರಿಗೂ ಇದರ ಅರ್ಹತೆ ಇದೆ ಎಂದು ವಿರೋಧಿಗಳಿಗೆ ತಿರುಗೇಟು ನೀಡದರು. ದಸರಾ ಹಬ್ಬ ಎಲ್ಲರನ್ನು ಒಳಗೊಂಡು ಆಚರಿಸುವ ಹಬ್ಬ. ನನ್ನ ಆಪ್ತ ಸಂಬಂಧಿಯೊಬ್ಬರಿದ್ದರು. ಅವರು ನನಗೆ ಅವರ ಮಾವ ಆಗಬೇಕು. ಅವರು ಇಲ್ಲೇ ಬೆಳಗೊಳದಲ್ಲಿ ಇದ್ದರು. ಮಹಾರಾಜರ ಅಂಗರಕ್ಷಣೆಯ ತಂಡದಲ್ಲಿ ಸೈನಿಕರಾಗಿದ್ದರು ಎಂದು ಬಾನು ಮುಷ್ತಾಕ್ ನೆನೆದಿದ್ದಾರೆ.

ಮಹಾರಾಜರು ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಅವರನ್ನ ನಂಬಿದರು. ಅವರ ಅಂಗಪಡೆಯ ಸದಸ್ಯರನ್ನಾಗಿ ಮಾಡಿಕೊಂಡಿದ್ದರು. ನನ್ನ ಧಾರ್ಮಿಕ ನಂಬಿಕೆಗಳು ಮಾನವೀಯ ದರ್ಶನಗಳನ್ನು ಕಲಿಸಿದೆ. ಎಲ್ಲರನ್ನು ಗೌರವವಿಸುದನ್ನು ಕಲಿಸಿದೆ. ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಎಲ್ಲರನ್ನೂ ಗೌರವಿಸೋಣ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.

ಈ ನೆಲದ ಹೂವುಗಳು ಐಕ್ಯತೆಯಿಂದ ಕೂಡಿರಲಿ. ನಮ್ಮೊಳಗಿನ ದ್ವೇಷ ಅಸಹಿಷ್ಣತೆ ಎಲ್ಲವನ್ನೂ ಹೋಗಿಸಲಿ. ಇಡೀ ಜಗತ್ತಿನ ಮಾನವನ ಕುಲಕ್ಕೆ ಶಾಂತಿ ಸಹನೆ ನ್ಯಾಯದ ದೀಪ ಬೆಳಗಿಸಲಿ, ಇಲ್ಲಿ ಬೆಳಗಿದ ದೀಪ ಜಗತ್ತನ್ನು ಬೆಳಗಲಿ. ಈ ನೆಲದ ಪರಂಪರೆ ಇದು ಸರ್ವಜನಾಂಗದ ಶಾಂತಿಯ ತೋಟದ ಅಂತ ಹೇಳುತ್ತೆ. ಪ್ರತಿ ಹೂ ತನ್ನ ತೋಟದಲ್ಲಿ ಅರಳಲಿ. ಒಟ್ಟಿಗೆ ಸೇರಿದಾಗ ಎಲ್ಲರೂ ಒಂದಾಗಲಿ. ನಾವೆಲ್ಲರೂ ಒಂದೇ ಗಗನದ ಪಯಣಿಕರು. ಭೂಮಿ ಯಾರನ್ನು ಹೊರ ತಳ್ಳಲ್ಲ. ಮನುಷ್ಯ ಮಾತ್ರ ಗಡಿ ಹಾಕುತ್ತಾನೆ. ಇದನ್ನು ನಾವೇ ಅಳಿಸಬೇಕು ಎಂದು ಬಾನು ಮುಸ್ತಾಕ್ ವಿರೋಧ ಮಾಡಿದವರಿಗೆ ಭಾಷಣದ ಮೂಲಕ ತಿರುಗೇಟು ನೀಡಿದರು.

- Advertisement -

Related news

error: Content is protected !!