Friday, September 4, 2026
spot_imgspot_img
spot_imgspot_img

ಬಂಟ್ವಾಳ ರಹೀಂ ಕೊಲೆ ಪ್ರಕರಣ

- Advertisement -
- Advertisement -

ಭರತ್ ಕುಮೇಲ್ ವಿರುದ್ಧ KCOCA ಕಾಯ್ದೆ

ಮಂಗಳೂರು: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಭರತ್ ಕುಮೇಲ್ ಸೇರಿ ಇತರ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಹೇಳಿದ್ದಾರೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಸಂಬಂಧ 13 ಆರೋಪಿಗಳನ್ನು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪ್ರಕರಣದ ಇನ್ನೊಬ್ಬ ಆರೋಪಿ ಭರತ್ ಕುಮ್ಮೇಲು ತಲೆಮರೆಸಿಕೊಂಡಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ 2000 (THE KARNATAKA CONTROL OF ORGANISED CRIME ACT-2000) ថ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!