Thursday, June 18, 2026
spot_imgspot_img
spot_imgspot_img

ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಉಡುಪಿ: ತಾಲೂಕಿನ 80 ಬಡಗುಬೆಟ್ಟು ಗ್ರಾಮದ ರಾಜೀವ್ ನಗರ ಬಸ್ ನಿಲ್ದಾಣದ ಹತ್ತಿರ ನಡೆದ ಪೊಲೀಸ್‌ ದಾಳಿಯಲ್ಲಿ ಜುಗಾರಿ ಆಡುತ್ತಿದ್ದ ನಾಲ್ವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬಂಧಿತ ಆರೋಪಿಗಳನ್ನು ಜಯಂತ್ ಪೂಜಾರಿ (37), ಶರಣಪ್ಪ ಪೂಜಾರಿ (45), ಈಶ (36) ಹಾಗೂ ಹಾಲೇಶ (35) ಬಂಧಿತರು ಎಂದು ಗುರುತಿಸಲಾಗಿದೆ.

ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್.ಐ ಅನೀಲ್ ಕುಮಾರ್ ಬಿ.ಎಂ ಹಾಗೂ ಸಿಬ್ಬಂದಿ ಪಡೆದ ಗುಪ್ತ ಮಾಹಿತಿಯ ಆಧಾರದ ಮೇಲೆ ಸ್ಥಳಕ್ಕೆ ದಾಳಿ ನಡೆಸಿ, ಅಂದರ್-ಬಾಹರ್ ಇಸ್ಪೀಟ್ ಜುಗಾರಿ ಆಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ರೂ. 2,100 ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!