Thursday, June 25, 2026
spot_imgspot_img
spot_imgspot_img

ವಿಟ್ಲ: ದ.ಕ ಜಿಲ್ಲಾ ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಉಪ ನಿರ್ದೇಶಕರ ಕಛೇರಿ ದ ಕ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ವಿಠ್ಠಲ ಎಜುಕೇಶನ್ ಸೊಸೈಟಿ ವಿಟ್ಲ ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ಮತ್ತು 17 ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ 2025 ವಿಠ್ಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೊಟ್ಟು ನೆರವೇರಿಸಿದರು. ವಿಟ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಸಂಚಾಲಕ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಕಾರ್ಯದರ್ಶಿ ಶಂಕರ ನಾರಾಯಣ ಪ್ರಸಾದ್, ಸದಸ್ಯ ನಿತ್ಯಾನಂದ ನಾಯಕ್, ವಿಟ್ಲ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ, ಮಾಜಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಎಂ ಎಸ್ ಮಹಮ್ಮದ್, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ರವಿಪ್ರಕಾಶ್, ಶಿವಪ್ರಸಾದ್ ಶೆಟ್ಟಿ, ರಾಜೇಂದ್ರ ರೈ, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಆಶಾ ನಾಯಕ್, ಜಯರಾಮ್, ಮಂಗೇಶ್ ಭಟ್ ವಿಟ್ಲ, ಪದ್ಮಯ್ಯ ಗೌಡ, ಮಾಲತಿ, ಸುದರ್ಶನ ಪಡಿಯಾರ್, ಭಾಸ್ಕರ ರೈ, ದಿನಕರ ಆಳ್ವ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂದರ್ಭದಲ್ಲಿ ಹಿರಿಯ ವಾಲಿಬಾಲ್ ಆಟಗಾರರಾದ ಹೆಚ್ ಸುಬ್ರಹ್ಮಣ್ಯ ಭಟ್, ಅಶ್ರಫ್ ಒಕ್ಕೆತ್ತೂರು, ಹರೀಶ್ ವಿ ಆರ್ , ಜಗದೀಶ್, ಶ್ರೀನಿವಾಸ್ ಗೌಡ, ಆಲಿಸ್ ಪಾಯಿಸ್, ಲಿಲ್ಲಿ ಪಾಯಿಸ್, ವಿಜಯ್ ಕುಮಾರ್ ಇವರನ್ನು ಗೌರವಿಸಲಾಯಿತು. ಉಪ ಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬುವನೇಶ್ ಪ್ರಸ್ತಾಪಿಸಿದರು. ಸುರೇಶ್ ಶೆಟ್ಟಿ ನಿರೂಪಿಸಿದರು. ಮೋಹನ್ ವಂದಿಸಿದರು.

- Advertisement -

Related news

error: Content is protected !!