Monday, October 26, 2026
spot_imgspot_img
spot_imgspot_img

ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್

- Advertisement -
- Advertisement -

ಟೆಲ್‌ಅವಿವ್: ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ 7 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆಗೊಳಿಸಿದೆ.

ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ ಮೊದಲ ಹಂತದಲ್ಲಿ 7 ಒತ್ತೆಯಾಳುಗಳನ್ನು ಹಮಾಸ್ ರೆಡ್‌ಕ್ರಾಸ್‌ಗೆ ಹಸ್ತಾಂತರಿಸಿದೆ. ಆದರೆ ಅವರ ಸದ್ಯದ ಸ್ಥಿತಿಯ ಬಗ್ಗೆ ಮಾಹಿತಿ ಇಲ್ಲ. ಜೊತೆಗೆ ಇಸ್ರೇಲ್ ವಶದಲ್ಲಿರುವ 1,900ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ 20 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಹಮಾಸ್ ತಿಳಿಸಿದೆ. ಅದರಂತೆ 20 ಮಂದಿ ಒತ್ತೆಯಾಳುಗಳ ಪೈಕಿ 7 ಮಂದಿಯನ್ನು ಬಿಡುಗಡೆ ಮಾಡಿದೆ.

ಇನ್ನು ಹಮಾಸ್ ಬಿಡುಗಡೆ ಮಾಡಿದ ಒತ್ತೆಯಾಳುಗಳು ಸದ್ಯ ರೆಡ್‌ಕ್ರಾಸ್ ನಿಯಂತ್ರಣದಲ್ಲಿದ್ದಾರೆ. ಒತ್ತೆಯಾಳುಗಳ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಟ್ರಂಪ್ ಪಶ್ಚಿಮ ಏಷ್ಯಾಕ್ಕೆ ತೆರಳಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಗಿದಿದೆ. ಇದೊಂದು ವಿಶೇಷ ಕಾರ್ಯಕ್ರಮ, ಸಹಜವಾಗಿ ಒಂದು ಕಡೆ ಸಂತೋಷ ಇದ್ರೆ, ಮತ್ತೊಂದು ಕಡೆ ದುಃಖ ಇದೆ. ಆದ್ರೆ ಎಲ್ಲರೂ ಅಚ್ಚರಿಯಾಗಿರುವುದು, ರೋಮಾಂಚನಗೊಂಡಿರುವುದು ಇದೇ ಮೊದಲು. ಆದ್ರೆ ಯುದ್ಧ ನಿಲ್ಲಿಸುವ ಭಾಗವಾಗಿರುವುದು ನಿಜಕ್ಕೂ ನನಗೆ ಗೌರವ. ಇನ್ಮುಂದೆ ನಾವು ಹಿಂದೆಂದೂ ಕಾಣದ ಅದ್ಭುತ ಕ್ಷಣಗಳನ್ನು ಕಳೆಯಲಿದ್ದೇವೆ” ಎಂದು ಸಂತಸ ವ್ಯಕ್ತಪಡಿಸಿದ್ದರು.

“ಈ ಯುದ್ಧ ನಿಲ್ಲಿಸಿದ್ದರಿಂದ ಯಹೂದಿಗಳು, ಮುಸ್ಲಿಮರು ಅಥವಾ ಅರಬ್ ದೇಶಗಳಾಗಿರಬಹುದು ಎಲ್ಲರೂ ಸಂತೋಷವಾಗಿದ್ದಾರೆ. ಇದರ ಬಳಿಕ ನಾವು ಈಜಿಪ್ಟ್ಗೆ ಹೋಗ್ತಿದ್ದೀವಿ. ಶಕ್ತಿಶಾಲಿ ಮತ್ತು ದೊಡ್ಡ ದೇಶಗಳ ನಾಯಕರನ್ನು ಹಾಗೂ ಅತ್ಯಂತ ಶ್ರೀಮಂತ ದೇಶಗಳನ್ನ ಭೇಟಿಯಾಗುತ್ತೇವೆ. ಅವರೆಲ್ಲರೂ ಈ ಒಪ್ಪಂದದಲ್ಲಿ ಭಾಗಿಯಾಗಿದ್ದಾರೆ” ಎಂದು ಹೇಳಿದ್ದರು.

- Advertisement -

Related news

error: Content is protected !!