Friday, August 28, 2026
spot_imgspot_img
spot_imgspot_img

ಕರೂರು ಕಾಲ್ತುಳಿತ ದುರಂತ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

- Advertisement -
- Advertisement -

ನವದೆಹಲಿ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಸಿಬಿಐಗೆ ವಹಿಸಿ ಆದೇಶಿಸಿದೆ.

ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚನೆ ಮಾಡಿದೆ.

ಇದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಘಟನೆಯಾಗಿದೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಕೋರ್ಟ್ ತಿಳಿಸಿದೆ. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದಿಂದ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಸಿಎಂ ಎಂ.ಕೆ ಸ್ಟಾಲಿನ್ ನೇತೃತ್ವದ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ.

- Advertisement -

Related news

error: Content is protected !!