Friday, June 5, 2026
spot_imgspot_img
spot_imgspot_img

ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡಗೆ ಪೊಲೀಸ್‌‌ ದಾಳಿ; ನಾಲ್ವರ ಬಂಧನ

- Advertisement -
- Advertisement -

ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆರೋಪಿಗಳನ್ನು ನಿಡೋಡಿಯ ಮಹೇಶ, ಕಟೀಲು ಪರಿಸರದ ಯಜೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.

ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡೋಡಿಯ ಮನೆಯೊಂದರಲ್ಲಿದ್ದಾರೆನ್ನುವ ಮಾಹಿತಿ ತಿಳಿದ ಇನ್ಸೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆ ಮನೆಗೆ ದಾಳಿ ನಡೆಸಿದೆ.

ಈ ವೇಳೆ ಲೈಂಗಿಕ ಕ್ರಿಯೆಗೆ ಬಳಸುವ ಕೆಲವೊಂದು ವಸ್ತುಗಳೂ ಅಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದ್ದು ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು ಈ ಕೃತ್ಯಕ್ಕೆ ಉಪಯೋಗಿಸುತ್ತಿದ್ದನೆನ್ನಲಾಗಿದೆ. ಆರೋಪಿಗಳ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರನ್ನು ಮತ್ತು ಆರೋಪಿಗಳನ್ನು ಠಾಣೆಗೆ ತಂದು ವಿಚಾರಿಸಿದಾಗ ಎಲ್ಲ ವಿಚಾರಗಳನ್ನೂ ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ಸ್‌ಪೆಕ್ಟ‌ರ್ ಸಂದೇಶ್‌ ಪಿ.ಜಿ.ಅವರ ಸಮಯಪ್ರಜ್ಞೆ ಮತ್ತು ಆರೋಪಿಗಳನ್ನು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

- Advertisement -

Related news

error: Content is protected !!