Thursday, June 11, 2026
spot_imgspot_img
spot_imgspot_img

ವಿಟ್ಲ: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ, ವಿಟ್ಲ: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ಕೊರತೆ ಪರಿಹರಿಸಿ; ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

- Advertisement -
- Advertisement -

ಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ, ವೈದ್ಯರ ಕೊರತೆ ಇದ್ದು ಅದನ್ನು ತಕ್ಷಣ ಪರಿಹರಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ವಿಟ್ಲ ಸಮುದಾಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಅಲ್ಲಿ ವೈದ್ಯರ ಕೊರತೆಯಿಂದ ಜನರಿಗೆ ಸಂಕಷ್ಟ ಉಂಟಾಗಿದೆ.

ವಿಟ್ಲದಲ್ಲಿ ಬೇರೆ ಯಾವುದೇ ಆಸ್ಪತ್ರೆ ಇಲ್ಲದ ಕಾರಣ ತುರ್ತುಸಂಧರ್ಭದಲ್ಲಿ ತೀವ್ರ ತೊಂದರೆಯನ್ನು ಅನುಭವಿಸಬೇಕಾಗಿ ಬಂದಿದೆ, ಜೊತೆಗೆ ಸಿಬಂದಿಗಳ ಕೊರತೆಯೂ ಇದೆ. ತಕ್ಷಣ ಈ ಬಗ್ಗೆ ಮುತುವರ್ಜಿ ವಹಿಸಿ ಪರಿಹರಿಸುವಂತೆ ಮನವಿ ಮಾಡಿದರು.ವಿಟ್ಲಸಮುದಾಯ ಕೇಂದ್ರ ಸುಸಜ್ಜಿತವಾದ ಹೊಂದಿದ್ದು ಸೌಲಭ್ಯಗಳ ಕೊರತೆ ಮಾತ್ರ ಇದೆ. ಈ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಪ್ರಾರಂಭಮಾಡುವಂತೆಯೂ ಸಚಿವರಿಗೆ ಶಾಸಕರು ಮನವಿ ಮಾಡಿದರು. ಶಾಸಕರ ಮನವಿಗೆ ಸಚಿವರು ಸ್ಪಂದಿಸಿದ್ದು ಶೀಘ್ರ ಕ್ರಮಕ್ಕೆ ಸೂಚನೆಯನ್ನು ನೀಡಿದ್ದಾರೆ.

- Advertisement -

Related news

error: Content is protected !!