- Advertisement -
- Advertisement -





ಕುಂದಾಪುರ: ಪಿಕಪ್ ಟ್ರಕ್ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.
ಮೃತರನ್ನು ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕಾರ ಇಲಿಯಾಸ್ (49) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಮಲ್ಪೆಯಿಂದ ಭಟ್ಕಳ ಕಡೆಗೆ ಹೋಗುತ್ತಿದ್ದ ಮೀನು ತುಂಬಿದ ಪಿಕಪ್ ಟ್ರಕ್ ಶಿರೂರು ಮಾರುಕಟ್ಟೆ ಕಡೆಗೆ ಹೋಗುತ್ತಿದ್ದ ಆಟೋರಿಕ್ಷಾಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








