Tuesday, September 22, 2026
spot_imgspot_img
spot_imgspot_img

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಜಪ್ಪು ಕುಡುಪಾಡಿ ರೈಲ್ವೆ ಬ್ರಿಡ್ಜ್ ಬಳಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರನ್ನು ಸ್ಥಳೀಯರಾದ ಮಾಹಿನ್ ಅಬ್ದುಲ್ ರೆಹಮಾನ್ ಮತ್ತು ಅಮ್ರಾಝ್ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 60 ಸಾವಿರ ರೂ. ಮೌಲ್ಯದ 14.44 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು 1.53 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!