Wednesday, July 29, 2026
spot_imgspot_img
spot_imgspot_img

ಮೂಡುಬಿದಿರೆ: ಸಿಡಿಲು ಬಡಿದು ಮನೆಗೆ ಹಾನಿ; ಅಪಾರ ನಷ್ಟ

- Advertisement -
- Advertisement -

ಮೂಡುಬಿದಿರೆ: ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ಹಾನಿಯಾಗಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಕುಂಗೂರು ಎಂಬಲ್ಲಿ ನಡೆದಿದ್ದು, ಅಪಾರ ನಷ್ಟ ಉಂಟಾಗಿದೆ.

ಕುಂಗೂರು ನಿವಾಸಿ ವಾಸು ಮುಗೇರ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಯೊಳಗಿನ ವಿದ್ಯುತ್ ಉಪಕರಣಗಳು ಸೇರಿದಂತೆ ಇತರ ಸೊತ್ತುಗಳು ಸಂಪೂರ್ಣವಾಗಿ ಹಾಳಾಗಿವೆ. ಘಟನೆಯಿಂದಾಗಿ ಮನೆಯ ಅಪಾರ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪುತ್ತಿಗೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ದಯಾನಂದ ಕೊಡ್ಯಡ್ಕ ಹಾಗೂ ಪಂಚಾಯತ್‌ ಸದಸ್ಯೆ ಸುಮಾ ಭಟ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

- Advertisement -

Related news

error: Content is protected !!