Wednesday, July 22, 2026
spot_imgspot_img
spot_imgspot_img

ಭಾರೀ ಮಳೆಗೆ ಮನೆ ಗೋಡೆ ಕುಸಿತ; ವೃದ್ಧೆ ಸಾವು

- Advertisement -
- Advertisement -

ಹಾಸನ: ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ.

ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಇನ್ನೂ ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಸ್ಥಳೀಯ ಶಾಸಕ ಎ.ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

- Advertisement -

Related news

error: Content is protected !!