Saturday, September 5, 2026
spot_imgspot_img
spot_imgspot_img

ಮೈಸೂರು: ಗ್ಯಾಸ್‌ ಗೀಸರ್​​ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಮೃತ್ಯು

- Advertisement -
- Advertisement -

ಮೈಸೂರು: ಗ್ಯಾಸ್‌ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಮಕ್ಕಳಾದ ಗುಲ್ಬಮ್ ತಾಜ್(23) ಮತ್ತು ಸಿಮ್ರಾನ್ ತಾಜ್ (21) ಮೃತಪಟ್ಟ ಸಹೋದರಿಯರು.ಗುರುವಾರ ರಾತ್ರಿ ಸಹೋದರಿಯರು ಒಟ್ಟಿಗೆ ಸ್ನಾನಕ್ಕೆ ತೆರಳಿದ್ದಾರೆ.

ಈ ವೇಳೆ ಸ್ನಾನದ ಕೋಣೆಯಲ್ಲಿ ಗ್ಯಾಸ್ ಗೀಸರ್ ಆನ್ ಮಾಡಿದ ತಕ್ಷಣ ಅದರಿಂದ ಬಿಡುಗಡೆಯಾದ ವಿಷಾನಿಲ ಸೇವನೆಯಿಂದ ಉಸಿರಾಡಲು ತೊಂದರೆ ಉಂಟಾಗಿ ತಕ್ಷಣ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ಕೆಲ ಹೊತ್ತಾದರೂ ಸ್ನಾನದ ಕೋಣೆಯಿಂದ ಹೊರಗೆ ಬರದಿದ್ದಾಗ, ಕುಟುಂಬಸ್ಥರು ತೆರಳಿ ನೋಡಿದಾಗ ಇಬ್ಬರೂ ಕುಸಿದು ಬಿದ್ದಿದ್ದರು.ತಕ್ಷಣ ಇಬ್ಬರು ಸಹೋದರಿಯರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!