Thursday, July 23, 2026
spot_imgspot_img
spot_imgspot_img

ಕುಂಬಳೆ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು

- Advertisement -
- Advertisement -

ಕುಂಬಳೆ: ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಕಾಸರಗೋಡಿನ ಪೆರ್ಮುದೆ ಸಮೀಪದ ಕುಂಬಳೆ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ.

ಶರೀಫ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಶರೀಫ್ ದುಬೈಯಲ್ಲಿ ಉದ್ಯೋಗದಲ್ಲಿದ್ದು, ಪತ್ನಿ ರುಕ್ಸಾನಾ ಹಾಗೂ ಇಬ್ಬರು ಮಕ್ಕಳು ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ತೆರಳಿದ್ದರು. ರವಿವಾರ ಸಂಜೆ ಮರಳಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮನೆಯ ಹಿಂಬಾಗಿಲ ಗ್ರಿಲ್ಸ್ ಮುರಿದು ಬಾಗಿಲಿನ ಬೀಗ ಮುರಿದು ಕಳ್ಳರು ಒಳನುಗ್ಗಿ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ.

ಕಪಾಟಿನಲ್ಲಿದ್ದ ವಸ್ತ್ರ ಹಾಗೂ ಇತರ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೀಗ ಮುರಿಯಲೆತ್ನಿಸಿದ ಕಬ್ಬಿಣದ ರಾಡ್ ಮನೆಯೊಳಗೆ ಪತ್ತೆಯಾಗಿದೆ. ಕುಂಬಳೆ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಮನೆಯವರ ಚಲನವಲನ ಅರಿತವರೇ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!