- Advertisement -
- Advertisement -




ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಲವು ಜನರಿಗೆ ವಂಚಿಸಿ, ಅವರಿಂದ ಸುಮಾರು ಒಂದು ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡು ಉದ್ಯೋಗ ಕೊಡಿಸದೆ ಮೋಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಬಂಧಿತರನ್ನು ಬೆಂಗಳೂರಿನ ಆನೆಕಲ್ನ ಪ್ರಕೃತಿ ಯು. (34): ಉಡುಪಿಯ ಗಂಗೊಳ್ಳಿಯ ಆಲ್ಟನ್ ರೆಬೇರೋ (42) ಎಂದು ಗುರುತಿಸಲಾಗಿದೆ.ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಜನರಿಗೆ ವಿದೇಶದಲ್ಲಿ ಕೆಲಸ ಕೊಡಿಸುವ ಆಶ್ವಾಸನೆ ನೀಡಿ ಹಣ ಪಡೆದು ವಂಚನೆ ಮಾಡಿದ್ದ ಬಗ್ಗೆ ದೂರು ದಾಖಲಾಗಿತ್ತು.
ದೂರಿನ ಅನ್ವಯ, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಆರೋಪಿಗಳು ಇದೇ ರೀತಿ ಹಲವು ಜನರಿಗೆ ವೀಸಾ ಕೆಲಸ ಕೊಡುವುದಾಗಿ ನಂಬಿಸಿ ಅವರಿಂದ ಪಡೆದುಕೊಂಡು ಅಕ್ರಮವಾಗಿ ಇರಿಸಿಕೊಂಡಿದ್ದ 24 ಪಾಸ್ಪೋರ್ಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ, 43 ಗ್ರಾಂ ಚಿನ್ನಾಭರಣ (ಅಂದಾಜು ಮೌಲ್ಯ: ₹4,30,000) ಮತ್ತು ಎರಡು ಮೊಬೈಲ್ಗಳನ್ನು ಬೆಂಗಳೂರಿನಲ್ಲಿ ವಶಪಡಿಸಿಕೊಳ್ಳಲಾಗಿದೆ.
- Advertisement -








