Sunday, July 26, 2026
spot_imgspot_img
spot_imgspot_img

ಆಕ್ಷೇಪಾರ್ಹ ಕಮೆಂಟ್ ಶೇರ್ ಮಾಡಿದ ಆರೋಪ; ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ

- Advertisement -
- Advertisement -

ಮಂಗಳೂರು: ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ನ್ನು ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗಮಿಸಿದ್ದಾರೆ.

ಕದ್ರಿ ಠಾಣೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಯಾವುದೇ ನೋಟೀಸ್ ನೀಡದೇ ಕರೆದುಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು, ನಾಯಕರ ಮಾತುಕತೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!