Saturday, July 25, 2026
spot_imgspot_img
spot_imgspot_img

ಕಾಸರಗೋಡು: ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ

- Advertisement -
- Advertisement -

ಕಾಸರಗೋಡು: ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಮಂಜೇಶ್ವರ ವಾಮಂಜೂರು ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪೈವಳಿಕೆ ಕಳಾಯಿಯ ಗೋಪಾಲಕೃಷ್ಣ ನಲ್ಲೂರಾಯ (66) ಎಂದು ಗುರುತಿಸಲಾಗಿದೆ. ಗಾಯಗೊಂಡ ಸಹ ಸವಾರ ಶಿವಶಂಕರ ಭಟ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೂಜಾ ಕಾರ್ಯಕ್ಕಾಗಿ ತೆರಳುತ್ತಿದ್ದಾಗ ಗೋಪಾಲಕೃಷ್ಣ ಅವರು ಸಂಚರಿಸುತ್ತಿದ್ದ ಸ್ಕೂಟರ್ ಇನ್ನೊಂದು ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಪರಿಣಾಮ ಗೋಪಾಲಕೃಷ್ಣ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಗೋಪಾಲಕೃಷ್ಣರು ಕೃಷಿಕರು, ಅರ್ಚಕರಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!