- Advertisement -
- Advertisement -





ಬಿ.ಸಿ.ರೋಡ್: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಬಿ.ಸಿ.ರೋಡ್ನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5:00 ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.
- Advertisement -








