Wednesday, July 29, 2026
spot_imgspot_img
spot_imgspot_img

ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಶವ ಪತ್ತೆ; ಮೂವರು ವಶಕ್ಕೆ

- Advertisement -
- Advertisement -

ಮಡಿಕೇರಿ: ಚೆಕ್‌ಪೋಸ್ಟ್‌ವೊಂದರಲ್ಲಿ ಶುಕ್ರವಾರ(ನ. 14) ರಾತ್ರಿ ಅರಣ್ಯ ಸಿಬ್ಬಂದಿ ತಾಪಾಸಣೆ ನಡೆಸುತ್ತಿದ್ದಾಗ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.

ಮೈಸೂರಿನಲ್ಲಿ ಪತಿಯೊಂದಿಗೆ ವಾಸವಿದ್ದ ಹರಿಯಾಣ ಮೂಲದ ನಾನ್ನಿದೇವಿ (47) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಎಂದಿನಂತೆ ಶುಕ್ರವಾರ ರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿದಾಗ ಅದೇ ಮಾರ್ಗವಾಗಿ ಬಂದ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ತಕ್ಷಣ ಎಚ್ಚೆತುಕೊಂಡ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ತಿಳಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಸಿದ್ದಾಪುರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳನ್ನು ಹಾಗೂ ಮಹಿಳೆಯ ಮೃತದೇಹವನ್ನು ವಶಕ್ಕೆ ಪಡೆದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

- Advertisement -

Related news

error: Content is protected !!