Monday, July 27, 2026
spot_imgspot_img
spot_imgspot_img

ಬೆಳ್ತಂಗಡಿ: ಕಟ್ಟಡದ ಮಹಡಿಯಿಂದ ಬಿದ್ದು ಯುವಕ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ನಿಡ್ಲೆಯ ಆನಂದ ವೇಲ್ವೇಸ್‌ ರೆಸಾರ್ಟ್‌‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ ಪುತ್ರ ಮನೀಶ್ (20) ಎಂದು ಗುರುತಿಸಲಾಗಿದೆ.

ಮನೀಶ್‌‌‌‌ರವರು ಕಟ್ಟಡದ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದು, ಗಾಯಗೊಂಡ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆ ಕರೆತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!